ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣನವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ಹೌಸ್ ಗೆ ಶನಿವಾರ  ಬೇಟಿ ನೀಡಿದರು.
  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಚಿವರನ್ನು ಶಾಲು ಹೊದಿಸಿ,ಹೂಗುಚ್ಚ ನೀಡಿ ಸ್ವಾಗತಿಸಿದರು.
ಈ ವೇಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ,ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.
ಈ ಸಂದರ್ಭ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಯ ಕುರಿತಂತೆ ಶಾಸಕರು,ಸಂಸದರ ಜೊತೆ  ಚರ್ಚಿಸಿದ ಸಚಿವ ಸೋಮಣ್ಣ ಅವರು ಮುಂದಿನ ಗ್ರಾ.ಪಂ., ಜಿ.ಪಂ.,ತಾ.ಪಂ.,  ಹಾಗೂ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿಯು ಮಾಹಿತಿ ಪಡೆದಕೊಂಡರು.
ಇದೇ ವೇಳೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ವಿವಿಧ
 ಬೇಡಿಕೆಗಳನ್ನು ಆದ್ಯತೆಯ ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಸಚಿವ ಸೋಮಣ್ಣ ಅವರು ಅಲ್ಲಿಂದ ಗುರುಪುರ ಜಂಗಮ ಮಠಕ್ಕೆ ಬೇಟಿ ನೀಡಿ ಶ್ರೀ  ರುದ್ರಮುನಿ ಮಹಾಸ್ವಾಮಿ ಹಾಗೂ ವಜ್ರದೇಹಿ ಮಠಕ್ಕೆ ಭೇಟಿಯಿತ್ತು ಶ್ರೀ  ರಾಜಶೇಖರನಾಂದ  ಸ್ವಾಮೀಜಿಯವರ ಆಶೀರ್ವಾದ ಪಡೆದರು. ಮಠದ ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿದರು. 
  ಸಚಿವರ ಬೇಟಿಯ
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾಮಗಾರಿಗಳ ಬೇಡಿಕೆ ಕುರಿತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು  ಮನವಿಯನ್ನು ನೀಡಿದರು.ಮತ್ತು  ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಗೆ ಸಂಬಂಧ ಪಟ್ಟಂತೆ ಸಾರ್ವಜನಿಕರ ಅನೇಕ  ಬೇಡಿಕೆಗಳಿದ್ದು ಅವುಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕೆಂದು ಎಂದು ಮನವಿಯನ್ನು ಮಾಡಿದರು.

*ಮನವಿಯಲ್ಲಿಏನೇನಿದೆ..
ಬಂಟ್ವಾಳ ತಾಲೂಕು ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಶಾಲಾ ಬಳಿಯಿಂದ ದೈಪಲ ಸಂಪರ್ಕ ರಸ್ತೆಗೆ ಆಜ್ಜಿಬೆಟ್ಟು ಶಾಲಾ ಬಳಿ ರೈಲ್ವೆ ಬ್ರಿಡ್ಜ್ ನಿರ್ಮಾಣ ಮಾಡುವುದು,
ಬಿ.ಮೂಡ ಗ್ರಾಮದ ಕುಂಬೋಧರಿ ಮಠ ದೇವಸ್ಥಾನದಿಂದ ಕುಲಾಲ ಭವನದ ಸಂಪರ್ಕ ರಸ್ತೆಗೆ ಕುಂಭೋಧರಿ ದೇವಸ್ಥಾನ ಬಳಿ ಅಂಡರ್‌ಪಾಸ್ ರಚನೆ ಮಾಡುವುದು,
ಬಿ.ಮೂಡ ಗ್ರಾಮದ ರೈಲ್ವೆ ನಿಲ್ದಾಣ ಬಳಿ ಹಿಂದೂ ರುದ್ರ ಭೂಮಿ ಮತ್ತು ರೈಲ್ವೆ ವಸತಿ ನಿಲಯ ಸಂಪರ್ಕ ರಸ್ತೆ ಅಭಿವೃದ್ದಿಗೊಳಿಸುವುದು, ಗೋಳ್ತಮಜಲು ಗ್ರಾಮದ ದೇವಸ್ಯ-ಕುದ್ರೆಮಾರ್-ತೋಟ ಭಾಗಕ್ಕೆ ಸಂಪರ್ಕಿಸಲು ದೇವಸ್ಯ ಕುದ್ರೆಮಾರ್ ಎಂಬಲ್ಲಿ ಅಂಡರ್‌ಪಾಸ್ ನಿರ್ಮಿಸುವುದು, ನೆಟ್ಟಮುಡ್ನರು ಗ್ರಾಮದ ನೇರಳಕಟ್ಟೆ ರೈಲ್ವೆ ನಿಲ್ದಾಣದ ಬಳಿ  ಪುಟ್ ಬ್ರಿಡ್ಜ್ ನಿರ್ಮಿಸುವುದು, ನೇರಳಕಟ್ಟೆ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಅವಕಾಶ ಕಲ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂಜಾ ಪೈ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮಾಜಿ ಮೇಯರ್ ಕವಿತಾ ಸನಿಲ್,  ಹಾಸನ ಜಿಲ್ಲೆಯ ಮಾಜಿ ಜಿ.ಪಂ.ಸದಸ್ಯ ಅಮಿತ್ ಶೆಟ್ಟಿ,  ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ  ದಿನೇಶ್ ಅಮ್ಟೂರು, ಸ್ಕ್ಯಾಡ್ಸ್ ಅಧ್ಯಕ್ಷ  ರವೀಂದ್ರ ಕಂಬಳಿ,ಜಿಲ್ಲಾ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಕೆ.ಎಂ.ಎಫ್ ನಿರ್ದೇಶಕ  ನಂದರಾಮ ರೈ,ಸೋಹನ ಅಧಿಕಾರಿ,ಬೂಡ  ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ,ಸಚಿನ್ ಅಡಪ, ಗ್ರಾ.ಪಂ.ಮಾಜಿ ಸದಸ್ಯ ಗಣೇಶ್ ರೈ ಮಾಣಿ,ಬಿಜೆಪಿ ಬಂಟ್ವಾಳ ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಮುಖರಾದ ಪ್ರಭಾಕರ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ನಾರ್ಲ,  ಪ್ರಣಾಮ್ ರಾಜ್ ಅಜ್ಜಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *