ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಭಾನುವಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ ವಹಿಸಿದ್ದರು, ಉದ್ಯಮಿ ಶಶಿಧರ ಪೈ ಮಾರೂರು, ಕಾರ್ಮಿಕ ನಿರೀಕ್ಷಕಿ ಲವೀನಾ ಡಿಸೋಜಾ, ಉದ್ಯಮಿಗಳಾದ ರಾಜೇಶ್ ಮೆಂಡನ್, ಯೋಗೀಶ್, ಸಂಘದ ಜಿಲ್ಲಾಧ್ಯಕ್ಷ ದಿನಕರ ಕುಲಾಲ್, ದ.ಕ. ಗ್ಯಾರೇಜು ಮಾಲಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ಸಂಘದ ನಿರ್ದೇಶಕ ಜೆ.ಪುಂಡಲೀಕ ಸುವರ್ಣ,ಬಿ.ಸಿ.ರೋಡಿನ ಹಿರಿಯ ನ್ಯಾಯವಾದಿ, ನೋಟರಿ ಅಶ್ವಿನ್ ಕುಮಾರ್ ರೈ, ಬಂಟ್ವಾಳ ಸಂಚಾರಿ ಠಾಣೆಯ ಎಸ್ ಐ ಆದರ್ಶ್ ಎಂ ಎಸ್, ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿ ಅಬ್ದುಲ್ ಮೊಯಿದ್ದಿನ್ ಉಪಸ್ಥಿತರಿದ್ದರು.

ಸಂಘದ ನೂತನ ನಿಯೋಜಿತ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ಮೆಕ್ಯಾನಿಕ್ ಸದಸ್ಯರನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತಲ್ಲದೆ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಹಾಗೂ ಗ್ಯಾರೇಜ್ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು, ಕಾರ್ಯದರ್ಶಿ ರಾಜೇಶ್ ಕುಲಾಲ್ ವರದಿ ವಾಚಿಸಿದರು,ಕೋಶಾಧಿಕಾರಿ ಭಾಸ್ಕರ್ ಕುಲಾಲ್ ಲೆಕ್ಕ ಪತ್ರ ಮಾಡಿಸಿದರು.ಸಿದ್ದಿಕ್ ಮೆಲ್ಕಾರ್ ಸ್ವಾಗತಿಸಿ, ಉಮೇಶ್ ಶೆಟ್ಟಿ ವಂದಿಸಿದರು.ರಂಗಕಲಾವಿದ ಹೆಚ್ ಕೆ ನೈನಾಡು ಕಾರ್ಯಕ್ರಮ ನಿರೂಪಿಸಿದರು.
