ಬಂಟ್ವಾಳ: ಬಿಜೆಪಿಯ ಸಕ್ರೀಯ ಕಾರ್ಯಕರ್ತರಾದ ಬೋಳಂತೂರಿನ ಈಶ್ವರ್ ಭಟ್ ರಾಕೋಡಿ ಅವರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈಅವರ ನಿವಾಸದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಅವರನ್ನು ಪಕ್ಷದ ಶಾಲು ಹಾಕಿ ಸ್ವಾಗತಿಸಲಾಯಿತು.ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸಹಿತ ಮುಖಂಡರು ಹಾಜರಿದ್ದರು.
