ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ಯುವವಾಹಿನಿ ಘಟಕ ವತಿಯಿಂದ ಬಿ.ಸಿ.ರೋಡ್ನಲ್ಲಿ ಮಂಗಳವಾರ ಆರಂಭಗೊಂಡ 14 ದಿನಗಳ ‘ತುಳು ಲಿಪಿ ಕಲಿಕಾ ಶಿಬಿರ’ಕ್ಕೆ ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಯಶವಂತ ದೇರಾಜೆ ಇವರು ಚಾಲನೆ ನೀಡಿದರು.
17btl-tulu
ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾತನಾಡಿ, ತಾಲ್ಲೂಕಿನ ಕೆಲವೊಂದು ಶಾಲೆಗಳಲ್ಲಿ ಕೂಡಾ ಆಸಕ್ತ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ‘ತುಳು ಲಿಪಿ ಕಲಿಕೆ’ಗೆ ಪ್ರೋತ್ಸಾಹಿಸಲಾಗುವುದು ಎಂದರು.
ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಿ.ಎಂ.ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕಾಡೆಮಿ ವತಿಯಿಂದ ತುಳು ಲಿಪಿ ಕಲಿಕಾ ಶಿಬಿರವನ್ನು ನಿರಂತರವಾಗಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.
ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ಸದಸ್ಯರಾದ ವಾಸು ಪೂಜಾರಿ, ಗಂಗಾಧರ, ಜಗಧೀಶ್ ಕುಂದರ್, ಲೋಕೇಶ್ , ಚಂಚಲಾಕ್ಷಿ, ಯುವ ವಾಹಿನಿ ಘಟಕ ಅಧ್ಯಕ್ಷ ನಾಗೇಶ್ ಪೊನ್ನೋಡಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್ , ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ಸಂಗಬೆಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ ಪ್ರಭು, ಪ್ರಮುಖರಾದ ಡಾ.ಸೇರಾ, ನೀಲೋಜಿ ರಾವ್, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಪ್ರೇಮನಾಥ್ ಕೋಟ್ಯಾನ್ ಮತ್ತಿತರರು ಇದ್ದರು.
ಇದೇ ವೇಳೆ ತುಳು ಲಿಪಿ ಅಕ್ಷರ ಮಾಲೆ ಬ್ಯಾನರ್ ಅನಾವರಣಗೊಳಿಸಲಾಯಿತು. ಸಂಪನ್ಮೂಲ ವ್ಯಕ್ತಿ ಬಂಟ್ವಾಳ ಕ.ಸಾ.ಪ ಮಾಜಿ ಅಧ್ಯಕ್ಷ ಬಿ ತಮ್ಮಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಅಮೀನ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *