ಬಂಟ್ವಾಳ : ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ಜಿಲ್ಲೆಯ ವಿವಿಧೆಡೆ ರಸ್ತೆ ಅಂಚಿನಲ್ಲಿ, ಹೆದ್ದಾರಿ ಡಿವೈಡರುಗಳಲ್ಲಿ ಅಳವಡಿಸಲಾಗಿರುವ ಬ್ಯಾನರ್, ಬಂಟಿಂಗ್ಸ್, ಪ್ಲೆಕ್ಸ್ ಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು  ಆದೇಶಿಸಿರುವ ಬೆನ್ನಲ್ಲೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿಗಳಲ್ಲಿ ಅಳವಡಿಸಲಾಗಿರುವ ಪ್ಲೆಕ್ಸ್ ಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಹೆದ್ದಾರಿಯಲ್ಲಿ ಅರಾ.ಹೆ.ಯ ಬಿ.ಸಿ.ರೋಡು ಸಹಿತ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯಕ್ರಮಗಳು ಮುಗಿದಿರುವ,ಅವಧಿ ಮೀರಿದ ಪ್ಲೆಕ್ಸ್ ಗಳು ಪಾಯಕಾರಿಸ್ಥಿತಿಯಲ್ಲಿರುವ ಬಗ್ಗೆ ಮಾಧ್ಯಮಗಳು ಸಚಿತ್ರ ವರದಿ ಪ್ರಕಟಿಸಿ ಗಮನಸೆಳೆದಿತ್ತು.
ಜಿಲ್ಲಾಧಿಕಾರಿಯವರು ಈ ನಿಟ್ಟಿನಲ್ಲಿ ಸಭೆ ನಡೆಸಿ ಪ್ಲೆಕ್ಸ್ ಗಳ ತೆರವಿಗೆ ಆದೇಶ ಹೊರಡಿಸಿದ ಬೆನ್ನಲ್ಲೆ ಕಾರ್ಯಾಚರಣೆಗಿಳಿದ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು  ಪೌರಕಾರ್ಮಿಕರ ಮೂಲಕ ಬಿ. ಸಿ ರೋಡು ನಗರದ ವಿವಿಧೆಡೆ ಸೇರಿದಂತೆ ಪುರಸಭಾ ವ್ಯಾಪ್ತಿಯ ಎಲ್ಲೆಂದರಲ್ಲಿ ಅಳವಡಿಸಲಾಗಿರುವ ಪ್ಲೆಕ್ಸ್ ಗಳನ್ನು ಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. 

By Suddi9

Leave a Reply

Your email address will not be published. Required fields are marked *