ಬಂಟ್ವಾಳ: ತಾಲೂಕಿನ  ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಿರಿಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಮತ್ತು ವಿದ್ಯಾರ್ಥಿ ವೇದಿಕೆಯ ಸಹಯೋಗದೊಂದಿಗೆ ವನಮಹೋತ್ಸವವನ್ನು ಆಚರಿಸಲಾಯಿತು.
 
 
ಈ ಸಂದರ್ಭದಲ್ಲಿ ವಿವಿಧ ಜಾತಿಯ ಹಣ್ಣುಗಳು ಮತ್ತು ಕಾಡಿನ ಗಿಡಗಳನ್ನು ಕಾಲೇಜಿನ ಕ್ರೀಡಾಂಗಣದ ಸುತ್ತ ನೆಡಲಾಯಿತು. 
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್ ಕುಮಾರ್ , ಕಾಲೇಜಿನ ಪ್ರಾಂಶುಪಾಲ ಪ್ರೊ. ಗಿರೀಶ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರಿಪ್ರಸಾದ್ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಸುಮನ್ ಶೆಟ್ಟಿ ಮುಂತಾದವರಿದ್ದರು. 
ಗಿಡನಾಟಿಯ ಸಂದರ್ಭದಲ್ಲಿ ಕಾಲೇಜಿನ ಬೋಧಕ- ಬೋಧಕೇತರರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಚಂದ್ರ ಪೂಜಾರಿ, ಚೇತನ್, ಸಂಜಯ್, ಸುಷ್ಮಿತಾ, ವಿದ್ಯಾರ್ಥಿವೇದಿಕೆಯ ಅಧ್ಯಕ್ಷ ಯಶೋಧರ ಮತ್ತು ಪದಾಧಿಕಾರಿಗಳು, ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ಉಪಸ್ಥಿತರಿದ್ದು ಶ್ರಮದಾನದ ಮೂಲಕ ಸಹಕರಿಸಿದರು.   

By Suddi9

Leave a Reply

Your email address will not be published. Required fields are marked *