ಬಂಟ್ವಾಳ : ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮ ನೆರವೇರಿತು.
ಇದಕ್ಕುಮುನ್ನ ಅರ್ಚಕರಾದ ಕೇಶವ ಶಾಂತಿ ಹಾಗೂ ಮಂದಿರದ ಆಡಳಿತ ಮುಖ್ಯಸ್ಥರಾದ ಸೂರಜ್ ಸಾಯಿ ಅವರ ಮಾರ್ಗದರ್ಶನದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಜನಾ ತಂಡದ ಸದಸ್ಯರು ಮಂದಿರದ ಪರಿಸರದಲ್ಲಿ ಗಿಡಗಳನ್ನು ನೆಡುವುದರ ಮೂಲಕ “ಯುವ ವೃಕ್ಷೋತ್ಸವ” ಕಾರ್ಯಕ್ರಮವನ್ನು ಆಚರಿಸಿದರು.

ಬಳಿಕ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಭಕ್ತಿ ಸುಧೆಯಲ್ಲಿ ಭಕ್ತರು ಸಾಯಿ ನಾಮಸ್ಮರಣೆಯಲ್ಲಿ ತಲ್ಲೀನರಾಗಿ, ಭಜನೆಗಳ ಮೂಲಕ ಸಾಯಿಬಾಬರನ್ನು ಭಕ್ತಿಪೂರ್ವಕವಾಗಿ ಸ್ಮರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅರ್ಚಕ ಕೇಶವ ಶಾಂತಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದು ವಿವಿಧ ಘಟಕಗಳ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಉಪಾಧ್ಯಕ್ಷರಾದ ಸತೀಶ್ ಕೊಪ್ಪರಿಗೆ, ಕೋಶಾಧಿಕಾರಿ ತ್ರಿವೇಣಿ ರಮೇಶ್, ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಲ, ಜಯಂತ ಬರಿಮಾರು, ನಾಗೇಶ್ ಪೂಜಾರಿ ಕೊಂಕಣಕೊಡಿ, ಪದಾಧಿಕಾರಿಗಳು, ಸದಸ್ಯರು ಯುವವಾಹಿನಿಯ ಭಜನಾ ತಂಡದ ಸದಸ್ಯರು ಉಪಸ್ಥಿತರಿದ್ದರು.
