ತುಂಬೆ: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ಯಶಸ್ವಿಯಾಗಿ ನಡೆಯಿತು.
ಚುನಾವಣೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ನಿಹಾದ್ ಅವರು ಅತ್ಯಧಿಕ ಮತಗಳನ್ನು ಪಡೆದು ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷರಾಗಿ ಆಯ್ಕೆಯಾದರೆ, ಅದೇ ವಿಭಾಗದ ವಿದ್ಯಾರ್ಥಿನಿ ಫಾತಿಮತುಲ್ ಅಲೀಮಾ ಸನಾಮಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಚುನಾವಣಾ ಪ್ರಕ್ರಿಯೆ ಶಾಂತಿಯುತ, ಪಾರದರ್ಶಕವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದರು. ಮತೆಣಿಕೆಯ ಬಳಿಕ ಪ್ರಾಂಶುಪಾಲರು ಫಲಿತಾಂಶವನ್ನು ಪ್ರಕಟಿಸಿದರು. ನೂತನವಾಗಿ ಆಯ್ಕೆಯಾದ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಿ ಜವಾಬ್ದಾರಿಯುತ ನಾಯಕತ್ವವನ್ನು ಪ್ರದರ್ಶಿಸುವಂತೆ ಕರೆ ನೀಡಿದರು.
ಚುನಾವಣೆಯ ಸಮಗ್ರ ಪ್ರಕ್ರಿಯೆಗೆ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಿನೇಶ್ ಶೆಟ್ಟಿ ಅಳಿಕೆ ಮಾರ್ಗದರ್ಶನ ನೀಡಿದರು. ಚುನಾವಣಾಧಿಕಾರಿಯಾಗಿ ಸಾಯಿರಾಂ ಜೆ. ನಾಯಕ್ ಕೆ., ಸಹ ಚುನಾವಣಾಧಿಕಾರಿಗಳಾಗಿ ಶರತ್ ಆಳ್ವ ಚನಿಲ ಹಾಗೂ ಚಂದ್ರಶೇಖರ್ ಶೆಟ್ಟಿ ಕರ್ತವ್ಯ ನಿರ್ವಹಿಸಿದರು.
ಮತಗಟ್ಟೆ ಅಧ್ಯಕ್ಷಾಧಿಕಾರಿಗಳಾಗಿ ಡಾ. ವಿಶ್ವನಾಥ ಪೂಜಾರಿ, ಅಬ್ದುಲ್ ರಹಿಮಾನ್ ಡಿ.ಬಿ., ಕವಿತಾ ಕೆ. ಬೇಬಿ,ಅಖಿಲಾ ನೀತಾಶ್ರೀ, ಪ್ರಫುಲ್ಲ ಶೆಟ್ಟಿ ಹಾಗೂ ಚಿತ್ರಾ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯರು ಸಹಕರಿಸಿದರು.
