ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ಹರಿಪ್ರಸಾದ್ ಅವರು ಯೋಗ ದಿನದ ಸಾಮೂಹಿಕ ಪ್ರತಿಜ್ಞೆಯನ್ನು ಬೋಧಿಸಿದರು. ಸಂಪನ್ಮೂಲ ವ್ಯಕ್ತಿ ಹಾಗೂ ಶಾಲೆಯ ಸಹಶಿಕ್ಷಕಿ ಸುಷ್ಮಾ ಕುಮಾರಿ ಇವರು ಸ್ವಸ್ಥ ಹಾಗೂ ಆರೋಗ್ಯಯುತ ಸಮಾಜಕ್ಕೆ ಯೋಗ ಮತ್ತು ಧ್ಯಾನದ ಅವಶ್ಯಕತೆಯನ್ನು ಯೋಗ ಪ್ರದರ್ಶನದ ಮೂಲಕ ತಿಳಿಸಿಕೊಟ್ಟರು.

ವಿವಿಧ ಭಂಗಿಯ ಆಸನಗಳನ್ನು ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಮಾಡಿಸಲಾಯಿತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚೈತ್ರಾ ಶೆಟ್ಟಿ , ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಚಾರ್ವಿ ಎಲ್ ಪಿ ಸ್ವಾಗತಿಸಿ, ಕುಮಾರಿ ರಿಝ್ನಾ ಹಲೀಮಾ ವಂದಿಸಿದಳು, ವಿದ್ಯಾರ್ಥಿನಿಯರಾದ ಕುಮಾರಿ ಆರ್ವಿ ಎಸ್ ಪೂಂಜ ಮತ್ತು ಮನ್ವಿತ್ ಎಮ್ ಶೆಟ್ಟಿಗಾರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಭಾಗವಹಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ತನ್ವಿಶ್ರೀ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ಮಾಡಿ ತೋರಿಸಿದರು.
