ಕೈಕಂಬ : ದೇಶ ಅತಿ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಸಂಸ್ಥೆಯ 16 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ ಆಗಸ್ಟ್ ೭ ಮತ್ತು ೮ರಂದು ಮೂಡಬಿದ್ರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.

ಮಂಗಳೂರಿನಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪ್ರಗತಿ ಮೇಳದ ಬಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಮಾಹಿತಿ ನೀಡಿ, ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 2007 ರಲ್ಲಿ `ಆಳ್ವಾಸ್ ಪ್ರಗತಿ’ ಆರಂಭಿಸಲಾಗಿದೆ. ಪ್ರತಿ ವರ್ಷವೂ ಈ ಮೇಳ ಯಶಸ್ವಿಯಾಗಿದೆ. ಕರ್ನಾಟಕ ಸೇರಿದಂತೆ ಸುತ್ತಲಿನ 4 ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶ ಒದಗಿಸುವ ವಿಶ್ವಾಸಾರ್ಹ ವೇದಿಕೆಯಾಗಿ ಬೆಳೆದಿದೆ ಎಂದರು.
ಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಆಳ್ವಾಸ್ ಪ್ರತಿಷ್ಠಾನ ಆಡಳಿತ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನೇಮಕಾತಿ ವಿಭಾಗ ಮುಖ್ಯಸ್ಥೆ ರಂಜಿತಾ ಆಚಾರ್ಯ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಎಸ್‌ಆರ್ ಭಾಗವಾಗಿ ಆಯೋಜಿಸಲಾಗುವ ಆಳ್ವಾಸ್ ಪ್ರಗತಿ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳು ಹಾಗೂ ಭಾಗವಹಿಸುವ ಕಂಪೆನಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಈ ಮೇಳದ ಪ್ರತಿಯೊಂದು ಆವೃತ್ತಿಯಲ್ಲೂ 250 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಿವೆ. ಇಲ್ಲಿಯವರೆಗೆ 66432 ಅಭ್ಯರ್ಥಿಗಳು ಶಾರ್ಟ್ಲಿಸ್ಟ್ಗೊಂಡಿದ್ದರೆ, 40848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗದ ಆಹ್ವಾನ ಪಡೆದುಕೊಂಡಿದ್ದಾರೆ.
ಈ ಬಾರಿಯ ಮೇಳದಲ್ಲಿ 300ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಬ್ಯಾಂಕಿಂಗ್ ಮತ್ತು ಹಣಕಾಸು, ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಔಷದೋದ್ಯಮ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ದೂರಸಂಪರ್ಕ, ಆರೋಗ್ಯ, ಮಾಧ್ಯಮ, ನಿರ್ಮಾಣ, ಎಲೆಕ್ಟಾçನಿಕ್ಸ್, ಶಿಕ್ಷಣ ಹಾಗೂ ಎನ್‌ಜಿಒ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖ ಸಂಸ್ಥೆಗಳು ನೇಮಕಾತಿ ನಡೆಸಲಿವೆ. ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿAಗ್, ಕಲಾ, ವಾಣಿಜ್ಯ, ನಿರ್ವಹಣೆ, ವಿಜ್ಞಾನ, ಐಟಿಐ, ನರ್ಸಿಂಗ್, ಐಟಿಐ, ಡಿಪ್ಲೋಮಾ, ಕೌಶಲ್ಯಾಧರಿತ ವೃತ್ತಿಗಳು, ಪಿಯುಸಿ, ಎಸ್ಸೆಸ್ಸೆಲ್ಸಿ ಹಾಗೂ ಇತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿರಲಿವೆ.
www.alvaspragati.com ವೆಬ್‌ಸೈಟ್‌ನಲ್ಲಿ ಕಂಪೆನಿಗಳ ಹೆಸರು ನೀಡಲಾಗಿದ್ದು, ಅಭ್ಯರ್ಥಿಗಳು ವೈಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳ ಆನ್‌ಲೈನ್ ನೋಂದಣಿ ಕಡ್ಡಾಯ. www.alvaspragati.com/candidate-registration ನಲ್ಲಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಆಗಸ್ಟ್ 7ರಂದು ಬೆಳಿಗ್ಗೆ 8 ಗಂಟೆಗೆ ಮೂಡಬಿದ್ರೆಯ ವಿದ್ಯಾಗಿರಿ ಕ್ಯಾಂಪನ್‌ನಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು 5-10 ಪಾಸ್‌ಪೋರ್ಟ್ ಗಾತ್ರದ ಪೋಟೊ, ನವೀಕರಿಸಿದ ಬಯೋಡೇಟಾ/ರೆಸ್ಯೂಮ್, ಎಲ್ಲ ಅಂಕಪಟ್ಟಿಗಳ ದೃಢೀಕೃತ ಜೆರಾಕ್ಸ್ ಪ್ರತಿ, ಆನ್‌ಲೈನ್ ನೋಂದಣಿ ಸಂಖ್ಯೆ/ ಐಡಿ ಸಂಖ್ಯೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 9741440490/ 9611750531/ 7975223865, 9731953123 ¸ ಕಂಪೆನಿಗಳು ಸಂಪರ್ಕಿಸಬಹುದು.
