ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ವಿದ್ಯಾರ್ಥಿಗಳಿಗೆ “ಹಲಸಿನ ಸೊಳೆ ಸಂಸ್ಕರಣ ಕಾರ್ಯಾಗಾರ”ವನ್ನು ಜೂ.20ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಾಗಾರದ ಉದ್ದೇಶ ವಿದ್ಯಾರ್ಥಿಗಳಿಗೆ ಹಲಸಿನ ಸೊಳೆ ಸಂಸ್ಕರಣೆಯ ವಿಧಾನಗಳು, ಆಹಾರ ಮೌಲ್ಯ ಹಾಗೂ ಸ್ವಉದ್ಯೋಗದ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಸಂತಿ ಕನ್ನಡ ಭಾಷಾ ಶಿಕ್ಷಕರು ಭಾಗವಹಿಸಿ ಹಲಸಿನ ಸೊಳೆ ಬೇರ್ಪಡಿಸುವ ವಿಧಾನದ ಬಗ್ಗೆ ಸ್ವಚ್ಛತೆ ಕಾಪಾಡುವ ಕ್ರಮಗಳು ಹಾಗೂ ವಿವಿಧ ಆಹಾರ ಪದಾರ್ಥಗಳ ತಯಾರಿಕೆಯ ಕುರಿತು ಪ್ರಾಯೋಗಿಕವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಮತಿ ಉಮಾ, ಕನ್ನಡ ಭಾಷಾ ಶಿಕ್ಷಕರು ಹಾಗೂ ಶ್ರೀಮತಿ ಶಾಂತಾ ಗಣಿತ ಶಿಕ್ಷಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳು ಉತ್ಸಾಹದಿಂದ ಹಲಸಿನ ಹಣ್ಣುಗಳನ್ನು ಸಂಸ್ಕರಿಸುವ ಕಾರ್ಯದಲ್ಲಿ ಭಾಗವಹಿಸಿ, ತಂಡಗಳಾಗಿ ಕಾರ್ಯನಿರ್ವಹಿಸಿ ಪ್ರಾಯೋಗಿಕ ಅನುಭವವನ್ನು ಪಡೆದರು. ಈ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ, ಶ್ರಮದ ಮಹತ್ವ ಹಾಗೂ ಆಹಾರ ಸಂಸ್ಕರಣೆಯ ಬಗ್ಗೆ ಆಸಕ್ತಿ ಬೆಳೆಸುವಲ್ಲಿ ಸಹಕಾರಿಯಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಚಿತ್ರಕಲಾ ಶಿಕ್ಷಕರಾದ ಮುರಳೀಧರ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು.
