ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು  ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.

ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಂಘಟನೆಯ ಕಾರ್ಯಕ್ರಮಗಳಲ್ಲಿ ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಮತ್ತು ವ್ಯವಸ್ಥಿತ ನಿರ್ವಹಣೆಯೇ ಅದರ ಯಶಸ್ಸಿನ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಯುವವಾಹಿನಿ ಬಂಟ್ವಾಳ ಘಟಕವು ಇತರ ಘಟಕಗಳಿಗೆ ಮಾದರಿಯಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಎನ್. ಅಶೋಕ್ ಕುಮಾರ್ ಪಡ್ಪು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ,
ಬಂಟ್ವಾಳ  ಶಾಸಕರಾದ ರಾಜೇಶ್ ನಾಯ್ಕ್ ಅಗಮಿಸಿ ನೂತನ ತಂಡಕ್ಕೆ ಶುಭ ಹಾರೈಸಿಸಿದರು ಸಮಿತಿಯ ಸಂಚಾಲಕರಾದ ದಿನೇಶ್ ಸುವರ್ಣ ರಾಯಿ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.
ಹಿರಿಯರ ಮಾರ್ಗದರ್ಶನ ಹಾಗೂ ಸದಸ್ಯರ ಸಹಕಾರದಿಂದ ಯುವವಾಹಿನಿ ಬಂಟ್ವಾಳ ಘಟಕವನ್ನು ಇನ್ನಷ್ಟು ಸಕ್ರಿಯವಾಗಿ ಮುನ್ನಡೆಸುವ ಆತ್ಮವಿಶ್ವಾಸವಿದೆ ಎಂದು ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಕಿರಣ್‌ರಾಜ್ ಪೂಂಜರೆಕೋಡಿ ಹೇಳಿದರು.
 ಡಾ. ಉಜ್ವಲ್ ಯು. ಸುವರ್ಣ ಹಾಗೂ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಮಾಜಿ ಅಧ್ಯಕ್ಷ ವಿಶ್ವನಾಥ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಕೊಂಕಣಪದವು ವೇದಿಕೆಯಲ್ಲಿ ಉಪಸ್ಥಿತರಿದ್ದರು.
 ಯುವವಾಹಿನಿ ಬಂಟ್ವಾಳ ಘಟಕದ ಕಚೇರಿಗೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೇಶ್ ಬಿ. ಅವರನ್ನು ಅಭಿನಂದಿಸಲಾಯಿತು. ಹಾಗೆಯೇ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ ಹಾಗೂ ಕೋಶಾಧಿಕಾರಿ ನವೀನ್ ಪೂಜಾರಿ ಅವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಮಧುಸೂದನ್ ಮದ್ವ  ವಾರ್ಷಿಕ ವರದಿ ವಾಚಿಸಿದರು. ನಾಗೇಶ್ ಪೂಜಾರಿ ನೈಬೇಲು ಪ್ರಸ್ತಾವಿಸಿ, ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಗೀತಾ ಜಗದೀಶ್ ವಂದಿಸಿದರು.
ಮಲ್ಲಿಕಾ ಜ್ಯೋತಿಗುಡ್ಡೆ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. 

By Suddi9

Leave a Reply

Your email address will not be published. Required fields are marked *