ಬಂಟ್ವಾಳ:  ಪ್ರತಿಯೊಬ್ಬ ವ್ಯಕ್ತಿ ತನಗೆ ಸಿಕ್ಕಿದ ಅವಕಾಶವನ್ನು ಜವಾಬ್ದಾರಿ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿಕೊಂಡು, ಪರಿಶುದ್ಧವಾದ ಮಾತುಗಳಿಂದ ಸಮಾಜದೊಂದಿಗೆ ಬೆರೆತಾಗ ನಾಯಕತ್ವದ ಗುಣಗಳನ್ನು ಬೆಳೆಸಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ, ಸಿದ್ದಕಟ್ಟೆ ಸರಕಾರಿ ಪ.ಪೂ‌. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

 


ಅವರು ಸಿದ್ದಕಟ್ಟೆಸರಕಾರಿ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇಣೂರು  ಕುಂಭಶ್ರೀ ಪದವಿ ಪೂರ್ವ ಕಾಲೇಜಿನ  ಪ್ರಾಂಶುಪಾಲರಾದ  ಶ್ರೀನಿವಾಸ ನಾಯ್ಕ ಅವರು ವಿದ್ಯಾಥಿ ೯ ಸಂಘವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ  ಸಿಕ್ಕಿದ ಅವಕಾಶಗಳನ್ನು ಬಳಸಿ ಉನ್ನತ ಹುದ್ದೆ ಪಡೆದುಕೊಂಡು  ಸಮಾಜದಲ್ಲಿ ಗೌರವಯತ ವ್ಯಕ್ತಿಯಾಗಿ ಬದುಕಬೇಕು ಮತ್ತು ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು” ಎಂದರು.
ಸಂಸ್ಥೆಯ ಪ್ರಾಂಶುಪಾಲರಾದ ಉದಯಕುಮಾರ್ ರವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ  ಪ್ರಮಾಣವಚನ ಬೋಧಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಭಾಸ್ಕರ ಎಂ  ಸ್ವಾಗತಿಸಿದರು.  ವ್ಯವಹಾರ ಅಧ್ಯಯನ ಉಪನ್ಯಾಸಕಿ ರೇಖಾ ಬಾಳಿಗಾ  ಅತಿಥಿಗಳನ್ನು ಪರಿಚಯಿಸಿದರು.   ಉಪನ್ಯಾಸಕ  ಸಂಜಯ್  ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *