ಬಂಟ್ವಾಳ : ಬಹುಕಾಲದ ಬೇಡಿಕೆಯಾಗಿದ್ದ ತಾಲೂಕಿನ ಅರಳ ಗ್ರಾಮದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಮಂಜೂರಾದ ವಿಶೇಷ ಅನುದಾನ 20 ರೂ.ಲಕ್ಷಗಳ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ನೆರವೇರಿಸಿದರು

ಬಳಿಕ ಮಾತನಾಡಿದ ಅವರು,ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು.
ಈ ಸಂದರ್ಭದಲ್ಲಿಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್,ಗ್ರಾಮಪಂಚಾಯತ್ ಮಾಜಿ ಸದಸ್ಯರಾದ ದೇಜಪ್ಪ ಪೂಜಾರಿ, ನಳಿನಿ ನಾಯ್ಕ್, ಜಗದೀಶ್ ಕೊಯಿಲ,ಎಂ ಬಿ ಅಶ್ರಫ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ .ಆರ್ .ಅಂಚನ್, ಅರಳ ವಲಯ ಅಧ್ಯಕ್ಷರಾದ ಲತೀಫ್ ಸುಂಟಿಹಿಟ್ಲು, ಅಶ್ರಫ್ ಕುಟ್ಟಿಕಲ, ಸಂತೋಷ್ ಪಿಂಟೋ,ಸುರೇಶ್ ಜೋರ, ಅಶ್ರಫ್ ಮುಲ್ಲರಪಟ್ಟಣ ಮತ್ತಿತರರು ಉಪಸ್ಥಿತರಿದ್ದರು.
