ವಿಟ್ಲ :ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಹಳೆ ವಿದ್ಯಾರ್ಥಿ ಸಂಘದ  ಮಹಾ ಸಭೆಯು ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ರವಿಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಂಟ್ವಾಳದ ಮಾಲತಿ ಕಾನತ್ತಡ್ಕ, ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಉಪಪ್ರಾಂಶುಪಾಲ ಕಿರಣ್ ಕುಮಾರ್, ಐಟಿಐ ಪ್ರಾಂಶುಪಾಲ ರಮೇಶ್ ರೈ ಅತಿಥಿಗಳಾಗಿ ಭಾಗವಹಿಸಿದ್ದರು.ಈ ಸಭೆಯಲ್ಲಿ 25 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

 ಕಾರ್ಯದರ್ಶಿ ಮೋಹನ್ ಬಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ರಾಜಶೇಖರ ಕಾರ್ಯಕ್ರಮ ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *