ಮುಂಬಯಿ ;ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬಯಿಗೆ  ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ವತಿಯಿಂದ ಜೂ. 20 ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ಅತ್ಯಂತ ಆದರದಿಂದ ಹಾಗೂ ಭವ್ಯವಾಗಿ ಸ್ವಾಗತಿಸಲಾಯಿತು. ಕರಾವಳಿ ಕರ್ನಾಟಕದ ಪರಿಸರ ಸಂರಕ್ಷಣೆ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ನೇತೃತ್ವದಲ್ಲಿ ಈ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್ರಾಜ್ಯ ಸಂಯೋಜಕ ಕೆ. ಪಿ. ಜಗದೀಶ್ ಅಧಿಕಾರಿ ಹಾಗೂ ಉಪಾಧ್ಯಕ್ಷರುಗಳಾದ ಐ. ಆರ್. ಶೆಟ್ಟಿ ಮತ್ತು ಫೆಲಿಕ್ಸ್ ಡಿಸೋಜಾಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್ ಅವರು ಉಪಸ್ಥಿತರಿದ್ದುಡಿ. ಕೆ. ಶಿವಕುಮಾ‌ರ್ ಅವರಿಗೆ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಮುಂಬಯಿ ಕನ್ನಡಿಗರ ಈ ಪ್ರೀತಿಯ ಸ್ವಾಗತವನ್ನು ಹೃತ್ತೂರ್ವಕವಾಗಿ ಸ್ವೀಕರಿಸಿದ ಮುಖ್ಯಮಂತ್ರಿ ಅವರು ಸಮಿತಿಯ ಪರಿಸರ ಕಾಳಜಿ ಮತ್ತು ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿ ಧನ್ಯವಾದಗಳನ್ನು ಅರ್ಪಿಸಿದರು. ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಆಯ್ಕೆಯಾದ ಕೂಡಲೇ ಜಯಕೃಷ್ಣ ಶೆಟ್ಟಿ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಅಭಿನಂದಿಸಿಕರಾವಳಿ ಕರ್ನಾಟಕದ ಒಟ್ಟಾರೆ ಅಭಿವೃದ್ಧಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದರು. ಜೂನ್ 19 ರಂದು ಬೆಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಪ್ರಮುಖ ಪರಿಶೀಲನಾ ಸಭೆ ನಡೆದಿದ್ದುಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡಲು ಸರಕಾರವು ಶೀಘ್ರದಲ್ಲಿಯೇ ಆ ಭಾಗದಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಿದೆ ಎಂದು ಮುಖ್ಯಮಂತ್ರಿ ಅವರು ಘೋಷಿಸಿರುವುದನ್ನು ಇಲ್ಲಿ ಪ್ರಮುಖವಾಗಿ ಸ್ಮರಿಸಬಹುದಾಗಿದೆ.

By Suddi9

Leave a Reply

Your email address will not be published. Required fields are marked *