ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನವನ್ನು ಭಗೀರಥ ಮಾನವಿಕ ಸಂಘದ ಆಶ್ರಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಮಾದಕ ವ್ಯಸನದ ಅಪಾಯಗಳು, ಅದನ್ನು ತಡೆಗಟ್ಟುವ ಮಾರ್ಗಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸುವ ಜಾಗೃತಿ ವಿಡಿಯೋವನ್ನು ಪ್ರದರ್ಶಿಸಲಾಯಿತು.
ಉಪನ್ಯಾಸಕರಾದ ಕುಮಾರಿ ರೇಷ್ಮಾ, ನವ್ಯಶ್ರೀ , ಶ್ರುತಿ ಮೊದಲಾದವರಿದ್ದರು.
