ಬಂಟ್ವಾಳ:ತಾಲೂಕಿನ ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಜಾಗೃತಿ ಸಭೆ ಪಾಂಡವರಕಲ್ಲು ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಮಾತನಾಡಿ, ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಪ್ರವೀಣ್ ರೊಡ್ರಿಗಸ್, ಉಳಿ ವಲಯ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಬಿತ್ತ, ಬಡಕಜೆಕಾರು ವಲಯ ಕಾಂಗ್ರೆಸ್ ಅಧ್ಯಕ್ಷ ವಸಂತ್ ಮಿತ್ತೊಟ್ಟು, ಜಯ ಬಂಗೇರ, ಡೀಕಯ ಬಂಗೇರ, ಬೂತ್ ಅಧ್ಯಕ್ಷರು, ಬಿ.ಎಲ್.ಎ.ಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
