ಬಂಟ್ವಾಳ: ವಿಶೇಷ ಚೇತನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡ್ ಕಚೇರಿಯಲ್ಲಿ ಶಂಭೂರು ನಿವಾಸಿ ತನುಷ್ ಕುಲಾಲ್ ಹಾಗೂ ಮಹಮ್ಮದ್ ಶರೀಫ್ ಗೂಡಿನ ಬಳಿ ಅವರಿಗೆ ಕೃತಕ ಕಾಲುಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ವಿಶೇಷ ಚೇತನರಿಗೆ ಅಗತ್ಯ ಸೌಲಭ್ಯಗಳು ಹಾಗೂ ಸಹಾಯೋಪಕರಣಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಕೃತಕ ಕಾಲಿನ ಮೂಲಕ ಅವರು ಹೆಚ್ಚು ಆತ್ಮವಿಶ್ವಾಸದಿಂದ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು.

ಸಮಾಜದ ಪ್ರತಿಯೊಬ್ಬರ ಬದುಕಿನಲ್ಲಿ ಆಶಾಕಿರಣ ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಅಗತ್ಯವಿರುವವರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ತಲುಪುವಂತೆ ನಿರಂತರ ಪ್ರಯತ್ನಿಸಲಾಗುವುದು ಎಂದು ಶಾಸಕರು ತಿಳಿಸಿದರು.


ಕೃತಕ ಕಾಲು ಪಡೆದ ಫಲಾನುಭವಿಗಳು ಹಾಗೂ ಅವರ ಕುಟುಂಬದವರು ಈ ನೆರವಿಗಾಗಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.ತಾ.ಪಂ.ಮಾಜಿ ಉಪಾಧಗಯಕ್ಷ ಆನಂದ ಎ.ಶಂಭೂರು,ಮಚ್ಚೇಂದ್ರ ಸಾಲಿಯಾನ್ ,ಶಶಿಕಾಂತ್ ಶೆಟ್ಟಿ ಅರ್ಮುಡಿ,ವಿಶ್ವನಾಥ ಚಂಡ್ತಿಮಾರ್ ಮತ್ತಿತರರಿದ್ದರು.

By Suddi9

Leave a Reply

Your email address will not be published. Required fields are marked *