ಬಂಟ್ವಾಳ:ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ರೂಪಿಸಿದ ಪಲ್ಸ್ ಪೋಲಿಯೋ ಲಸಿಕೆ ಸ್ವೀಕರಿಸುವ ಮೂಲಕ ಮಕ್ಕಳ ಪೋಷಕರು ಜವಾಬ್ದಾರಿಯುತವಾಗಿ ನಡೆದುಕೊಂಡಾಗ ಆರೋಗ್ಯಪೂರ್ಣ ಮತ್ತು ಸಮೃದ್ಧ ಸಮಾಜ ನಿಮರ್ಾಣವಾಗುತ್ತದೆ ಎಂದು ಬೂಡ ಅಧ್ಯಕ್ಷ ಬೇಬಿ ಕುಂದರ್ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ನಿಯೋಜಿತ ರವಿಚಂದ್ರ ಬಂಟ್ವಾಳ್ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ರೇಶ್ಮಾ ಟೆಲ್ಲಿಸ್, ಅಶೋಕ್, ಪ್ರವೀಣ್ ಶುಭ ಹಾರೈಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಮಾತನಾಡಿ, ‘ತಾಲ್ಲೂಕಿನಾದ್ಯಂತ ಒಟ್ಟು 190 ಬೂತ್ ಗಳಲ್ಲಿ 784 ಕಾರ್ಯಕರ್ತೆಯರ ಮೂಲಕ ಪೋಲಿಯೋ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆಡಳಿತ ವೈದ್ಯಾಧಿಕಾರಿ ಡಾ.ದಿನೇಶ್ ಕಾಮತ್ ಸ್ವಾಗತಿಸಿ, ವಂದಿಸಿದರು.

By Suddi9

Leave a Reply

Your email address will not be published. Required fields are marked *