ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆ ಪಾಣೆಮಂಗಳೂರು ಕಾರ್ಯಕ್ಷೇತ್ರದ ಸಜೀಪ ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಸ್ವಾಸ್ಥ್ಯ ಸಂಕಲ್ಪ ಆನ್ ಲೈನ್ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಸಲಾಯಿತು.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ತಾರನಾಥ್ ಕುಮಾರ್ ಉದ್ಘಾಟಿಸಿದರು.
ಬೆಂಗಳೂರು ಎಸ್ ಪಿ ಡಾ. ವೆಂಕಟೇಶ್ ಪ್ರಸನ್ನ, ಬೆಂಗಳೂರಿನ ಖ್ಯಾತ ಹೃದಯ ರೋಗ ತಜ್ಞ ಡಾ. ದೇವಿ ಪ್ರಸಾದ್ ಅವರು ಆನ್ ಲೈನ್ ನಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸೂಕ್ತ ಮಾಹಿತಿ ನೀಡಿದರು.
ಈ ಸಂದರ್ಭ ರಾಜ್ಯದ ಸುಮಾರು 1011 ಶಾಲಾ ಕಾಲೇಜುಗಳಲ್ಲಿ ಯುವ ಜನತೆಗೆ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲು ಏಕಕಾಲದಲ್ಲಿ ಆನ್ ಲೈನ್ ಮೂಲಕ ಮಾಹಿತಿ ನೀಡಲಾಯಿತು.,

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ, ಹೇಮಾವತಿ ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜನಜಾಗೃತಿ ವೇದಿಕೆಯ ವಿವೇಕ್ ವಿನ್ಸೆಂಟ್ ಪಾಯಸ್ ನೇರ ಸಂಪರ್ಕದ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು.
ಅತಿಥಿಯಾಗಿ ಭಾಗವಹಿಸಿದ್ದ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪ್ರಕಾಶ್ ಕಾರಂತ್ ಮಾತನಾಡಿ, ಆನ್ ಲೈನ್ ಮೂಲಕ ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ರೂಢಿಸಕೊಳ್ಳಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲೆ 1 ರ ನಿರ್ದೇಶಕ ದಿನೇಶ್ ಡಿ.ಅವರು ಮಾತನಾಡಿ, ಮಕ್ಕಳು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ತಮ್ಮೂರಿಗೆ ಕೀರ್ತಿ ತರುವ ವ್ಯಕ್ತಿಗಳಾಗಬೇಕು ಎಂದರು.
ಬಂಟ್ವಾಳ ನಗರ
ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ರಕ್ಷಿತ್ ರೈ, ಕಾಲೇಜು ಪ್ರಾಂಶುಪಾಲ ಎನ್. ಎಸ್. ಜೈರಾಬಿ,ಸಜೀಪ ಮೂಡ ಒಕ್ಕೂಟ ಅಧ್ಯಕ್ಷೆ ಹರಿಣಾಕ್ಷಿ,ಸೇವಾ ಪ್ರತಿನಿಧಿ ಬಬಿತಾ ಮೊದಲಾದವರು ಉಪಸ್ಥಿತರಿದ್ದರು.
ಉಪನ್ಯಾಸಕಿ ಸ್ಪೂರ್ತಿ ಸ್ವಾಗತಿಸಿ, ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
