ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಯ ಸಂದೇಶ ಸಾರುವ ಉದ್ದೇಶದಿಂದ ಹಮ್ಮಿಕೊಂಡಿದ್ದ ‘ಯುವ ವೃಕ್ಷೋತ್ಸವ–2026’ ಕಾರ್ಯಕ್ರಮವು ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಸಂಪನ್ನಗೊಂಡಿತು.

“ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾದ ಈ ಅಭಿಯಾನದಡಿ ಜೂನ್ ಪೂರ್ತಿ ಒಂದು ತಿಂಗಳ ಅವಧಿಯಲ್ಲಿ ದೇವಸ್ಥಾನ, ದೈವಸ್ಥಾನ, ಶಾಲೆ-ಕಾಲೇಜು, ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ರುದ್ರಭೂಮಿ ಸೇರಿದಂತೆ 20ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.
ಯುವ ವೃಕ್ಷೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ, ಕರ್ನಾಟಕ ಪ್ರೌಢ ಶಾಲೆ ಮಾಣಿಯ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮಸುಂದರ ಸಾಲಿಯಾನ್, ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿಯ ಸಂಚಾಲಕ ರಾಜೇಶ್ ಸುವರ್ಣ ಬಂಟ್ವಾಳ , ಯುವವಾಹಿನಿ ಬಂಟ್ವಾಳ ಘಟಕದ ಸಮಾಜ ಸೇವೆ ನಿರ್ದೇಶಕರಾದ ಚಿನ್ನಾ ಕಲ್ಲಡ್ಕ, ಕರ್ನಾಟಕ ಪ್ರೌಢ ಶಾಲಾ ಮಾಣಿಯ ಶಿಕ್ಷಕಿ ಪ್ರತಿಮಾ ಹರೀಶ್, ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
