ಬಂಟ್ವಾಳ: ಗ್ರಾಮದ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಬದ್ಧವಾಗಿದ್ದು, ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಿದೆ. ಗ್ರಾಮವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮನೆ ಮನೆಗೆ ಕಸ ಸಂಗ್ರಹ ವ್ಯವಸ್ಥೆಗೆ ಎಲ್ಲರೂ ಸಹಕರಿಸಬೇಕು. ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡುವ ಮೂಲಕ ವೈಜ್ಞಾನಿಕ ಕಸ ವಿಲೇವಾರಿಗೆ ಕೈಜೋಡಿಸುವಂತೆ ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚ್ಚಿನ್ ಕುಮಾರ್ ಕೋರಿದ್ದಾರೆ.
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್‌ನ 2026–27ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಗ್ರಾಮಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಲ್ಲಿ ದೊರಕುವಂತ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ, ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಕೃಷ್ಣ ನಾಯ್ಕ್ ಸ್ವಾಗತಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯತ್ ಮಾಜಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.  ಕಾರ್ಯದರ್ಶಿ ಮಹಮ್ಮದ್ ಅಶ್ರಫ್ ವಂದಿಸಿದರು.

By Suddi9

Leave a Reply

Your email address will not be published. Required fields are marked *