ಬಂಟ್ವಾಳ:ಯುವವಾಹಿನಿ (ರಿ.) ಬಂಟ್ವಾಳ ಘಟಕದ  ವಿಶೇಷ ಯೋಜನೆ “ಮನೆ ಮನೆ ಹಸಿರು ಅಭಿಯಾನ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ  ಅರುಣ್ ಕುಮಾರ್ ಮಹಾಂಕಾಳಿಬೆಟ್ಟು ಇವರ ನಿವಾಸದಲ್ಲಿ ಹಾಲಿ  ಅಧ್ಯಕ್ಷ ಅಧ್ಯಕ್ಷ ಕಿರಣ್ ರಾಜ್ ಪೂಂಜರೆಕೋಡಿ ಅವರ ನೇತೃತ್ವದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ  ಚಾಲನೆ ನೀಡಲಾಯಿತು.


ಈ ಬಳಿಕ ಮಾತನಾಡಿದ ಅವರು “ಮನೆ ಮನೆ ಹಸಿರು ಅಭಿಯಾನ”ವು ಕೇವಲ ಗಿಡ ನೆಡುವ ಕಾರ್ಯಕ್ರಮವಾಗಿರದೆ, ಪರಿಸರದ ಬಗ್ಗೆ ಜನರಲ್ಲಿ ಅರಿವು ಮತ್ತು ಜವಾಬ್ದಾರಿಯನ್ನು ಮೂಡಿಸುವ ಸಾಮಾಜಿಕ ಚಳುವಳಿಯಾಗಿದೆ ಎಂದು ತಿಳಿಸಿದರು.


ಮುಂದಿನ ದಿನಗಳಲ್ಲಿ ಘಟಕದ ವ್ಯಾಪ್ತಿಯ ಎಲ್ಲಾ ಸದಸ್ಯರ ಮನೆಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು  ಸಂಕಲ್ಪವನ್ನು ಮಾಡಿದರು.
ಯುವವಾಹಿನಿ ಬಂಟ್ವಾಳ ಘಟಕದ  ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *