ಬಂಟ್ವಾಳ: ಶಿಕ್ಷಣ  ಹಾಗೂ ಸಾಮಾಜಿಕ ಸಂಘಟನಾ ಕ್ಷೇತ್ರದಲ್ಲಿ  ಗಮನಾರ್ಹ ಸಾಧನೆ ಮಾಡಿದ ಶಿಕ್ಷಣ ತಜ್ಝ ರಮಾನಂದ ಅವರು “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026” ಕ್ಕೆ ಭಾಜನರಾಗಿದ್ದಾರೆ.

ಜುಲೈ 26ರಂದು  ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಅಚರಿಸುತ್ತಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಮಾನಂದ ಅವರು ಪ್ರಸ್ತುತ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರಲ್ಲದೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿಯಾಗಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲು ತೊಡಗಿಸಿರುವ ಅವರು
ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317ಡಿ ಎ ಕ್ಲಬ್ ಓರಿಯಂಟೇಶನ್ ಮುಖ್ಯ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಶಿಕ್ಷಣ, ಸಾಹಿತ್ಯ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ನೀಡಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

By Suddi9

Leave a Reply

Your email address will not be published. Required fields are marked *