ಬಂಟ್ಚಾಳ: ಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಅಧ್ಯಕ್ಷರಾದ ರವಿ ಎಂ. ಎನ್ ಅವರು , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಉದ್ದೇಶಗಳು, ಕಾರ್ಯಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು.

ಶ್ರೀ ರಾಮ ಪದವಿಪೂರ್ವ ವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಅಶೋಕ್ ಕುಮಾರ್ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಂಗಳೂರು ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಕುಮಾರಿ ಪ್ರಿಯಾಂಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀರಾಮ ಪದವಿ ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಕುಮಾರಿ ತ್ರಿಶಾ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.
