ಬಂಟ್ವಾಳ:  ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡನಾಟಿ ಕಾರ್ಯಕ್ರಮ ನಡೆಸಲಾಯಿತು. ಬಂಟ್ವಾಳ ಉಪ ಅರಣ್ಯ ವಲಯಾಧಿಕಾರಿಗಳಾದ ಕೃಷ್ಣ  ಮತ್ತು ಪ್ರಕಾಶ್ ಶೆಟ್ಟಿ ಅವರು ಭಾಗವಹಿಸಿ ಪರಿಸರ ನಾಶದಿಂದ ಉಂಟಾಗುವ ದುಷ್ಪಾರಿಣಾಮವನ್ನು ವಿವಿಧ ನಿದರ್ಶನದ ಮೂಲಕ ತಿಳಿಸಿದರು.
 
 
ಶಾಲಾ ಆವರಣದಲ್ಲಿ ಗಿಡ ನಾಟಿ ನಡೆಸಲಾಯಿತು. ಮುಖ್ಯ ಶಿಕ್ಷಕ ಹರಿಪ್ರಸಾದ್ ಅವರು ಮಾತನಾಡಿ,  ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಗಿಡ ನೆಟ್ಟು ಪೋಷಿಸುವುದರಿಂದ ಭೂಮಿಯ ಸಮತೋಲನ ಸಾಧ್ಯ ಎಂದರು. ವಿದ್ಯಾರ್ಥಿಗಳಿಂದ ವಿವಿಧ ಪ್ರಕೃತಿ ಗೀತೆ, ಪರಿಸರ ಸಂಬಂಧಿ ನೃತ್ಯ ಕಾರ್ಯಕ್ರಮಗಳು ನಡೆಯಿತು. ಸಂಘಂದ ಸದಸ್ಯರು, ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿಯಾದ ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ ದೇವಾಡಿಗ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕುಮಾರಿ ಕೀರ್ತನಾ ಟಿ.ಕೆ ಸ್ವಾಗತಿಸಿದರು, ಅನ್ವಿತಾ ಕೆ.ವಿ ವಂದಿಸಿದರು ,  ಕುಮಾರಿ ಮಿಥಾಲಿ ವೈ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *