ಬಂಟ್ವಾಳ : ಸ್ತ್ರೀ ಗೌರವಿಸಲ್ಪಡುವಲ್ಲಿ ದೇವತೆಗಳು ನೆಲಸುತ್ತಾರೆ . ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ. ಪ್ರಕೃತ ವಿದ್ಯಮಾನಗಳು ಮಕ್ಕಳ ಮೇಲೆ ಆಗುವ ವಿಕೃತ ದೌರ್ಜನ್ಯಗಳಿಗೆ ಇಂತಹ ಕಾನೂನು ಮಾಹಿತಿ ಕಾರ್ಯಕ್ರಮ ಸಾರ್ಥಕವಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಡಿ.ಆರ್ ನುಡಿದರು . ಅವರು ಬಿ.ಸಿ.ರೋಡ್ ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು .
KAR_7116
ಸಂಪನ್ಮೂಲ ವ್ಯಕ್ತಿಗಳಾದ ಆಶಾಮಣಿ ಡಿ.ರೈ ಮಹಿಳೆಯರ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು . ಮಕ್ಕಳ ಕಲ್ಯಾಣ ಸಮತಿ ಸದಸ್ಯ ಉಮೇಶ್ ನಿರ್ಮಲ್ ಫೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ಅಧ್ಯಕ್ಷತೆ ವಹಿಸಿದ್ದರು . ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಪ್ರಸಾದ್ , ಶಿಶು ಅಭಿವೃದ್ಧಿ ಅಧಿಕಾರಿ ಮಲ್ಲಿಕಾ , ಅನ್ನಪೂರ್ಣ , ಠಾಣಾಧಿಕಾರಿಗಳಾದ ನಂದಕುಮಾರ್ , ರಕ್ಷಿತ್ , ಅಪರಾಧ ವಿಭಾಗದ ಠಾಣಾಧಿಕಾರಿ ಚಂದ್ರಶೇಖರಯ್ಯ , ಮಾಜಿ ವಕೀಲರ ಸಂಘದ ಅಧ್ಯಕ್ಷ ಶ್ರೀಧರ ಪೈ , ಭಾರತಿ ಕುಂದರ್ ಉಪಸ್ಥಿತರಿದ್ದರು . ಮೇಲ್ವಿಚಾರಕಿ ಗಾಯತ್ರಿ ಆರ್ ಕಂಬಳಿ ಸ್ವಾಗತಿಸಿದರು. ಉಷಾ ವಂದಿಸಿ ವಿಶಾಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *