ಬಂಟ್ವಾಳ : ಬಿಸಿರೋಡು  ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ.

 

ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ  ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದ  ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸ್ಥಗಿತಗೊಂಡಿದೆ.

  ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ  ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿ   ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದು  ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು,ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಎಸ್‌ ಪಿ ಡಾ.ಅರುಣುಕುಮಾರ್‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.

By Suddi9

Leave a Reply

Your email address will not be published. Required fields are marked *