ಬಂಟ್ವಾಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಬಿ.ಫೌಜಿಯಾ ತರನ್ನುಮ್ ಐಎಎಸ್ ಅವರು ಶನಿವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಆರ್ ಎಫ್ ಘಟಕಕ್ಕೆ ಭೇಟಿ ನೀಡಿ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿ ಮಾಹಿತಿ ಪಡೆದರು.

ನಂತರ ಅಳಿಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನರ್ವಾಡೆ ವಿನಾಯಕ ಕಾರ್ಬಾರಿ , ಪ್ರೊಬೇಷನರಿ ಐಎಎಸ್ ಅಧಿಕಾರಿ ಅರ್ಚಿತ್ ದೊಂಗ್ರಿ, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯ್ಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಂಟ್ವಾಳ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಿ.ಎಸ್.ನಟೇಶ್, ಸಹಾಯಕ ಅಭಿಯಂತರರಾದ ಜಗದೀಶ್, ಕಿರಿಯ ಅಭಿಯಂತರರಾದ ನಾಸೀರ್, ಜಿಲ್ಲಾ ಪಂಚಾಯತ್ ನೈರ್ಮಲ್ಯ ಇಲಾಖೆಯ ಸಂಯೋಜಕರಾದ ನವೀನ್, ಪವನ್ ಕುಮಾರ್ , ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತ್ ಪಂಚಾಯತ್ ಸಿಬ್ಬಂದಿ, ಘಟಕದ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.
