ಬಂಟ್ವಾಳ: ತಾಲೂಕಿನ ದೇವಸ್ಯಪಡೂರು ಗ್ರಾಮದ ಅತ್ತಳಿಕೆ ಸಮೀಪ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟ ಪ್ರಮೋದ್ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ದುಃಖದ ಈ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅವರು ಭರವಸೆ ನೀಡಿದರು
ಅಪಘಾತದಲ್ಲಿ ಗಾಯಗೊಂಡಿರುವ ಸುನಿಲ್ ಅವರ ಮನೆಗೂ ಭೇಟಿ ನೀಡಿದ ಶಾಸಕರು, ಅವರ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸುನಿಲ್ ಅವರು ಶೀಘ್ರ ಗುಣಮುಖರಾಗಿ ತಮ್ಮ ದೈನಂದಿನ ಬದುಕಿಗೆ ಮರಳಲಿ ಎಂದು ಹಾರೈಸಿದರು.
ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ರಸ್ತೆ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬೂಡಾ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ,ಪ್ರಮುಖರಾದ ರಾಮದಾಸ್ ಬಂಟ್ವಾಳ, ಸತೀಶ್ ಶೆಟ್ಟಿ ಮಧ್ವ, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಅಜಿತ್ ಕುಮಾರ್ ಶೆಟ್ಟಿ, ಶಶಿಕಾಂತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
