ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ದ್ರವ್ಯ ಸೇವನೆ ವಿರುದ್ದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಎನ್.ಸಿ.ಸಿ ಘಟಕದ ಉಸ್ತುವಾರಿ ರವಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಉಪಸ್ಥಿತರಿದ್ದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳಾದ ಕುಮಾರಿ ಜೋಸಲ್ ಡಿಸೋಜ ಸ್ವಾಗತಿಸಿದರು, ದ್ರಶ್ಯ ವಂದಿಸಿ , ಕುಮಾರಿ ದೃತಿ ಕಾರ್ಯಕ್ರಮವನ್ನು ನಿರೂಪಿಸಿದರು.
