ಬಂಟ್ವಾಳ : ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಹಾಡು ಹಗಲೇ ಅಮಾಯಕ ಯುವತಿ ಲಾವಣ್ಯಳನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯಾಹಂತಕ ಚೇತನ್ ಗೆ ಗಲ್ಲುಶಿಕ್ಷೆಗೊಳಪಡಿಸಲು ಪೂರಕವಾದ ಸಾಕ್ಷ್ಯವನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಭಾಕರ ಪ್ರಭು ಅವರ ಅಧಗಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ಇಉ ತೀರ್ಮಾನ ಕೈಗೊಂಡಿದ್ದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಯಾರೊಬ್ಬ ವಕೀಲರು ಕೂಡ ಆರೋಪಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಾಡದಂತೆಯು ಸಂಬಂಧಿಸಿದ ವಕೀಲರ ಸಂಘಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಪ್ರಕರಣದಲ್ಲಿ ಆರೋಪಿಗೆ ಗಲ್ಲುಶಿಕ್ಷೆಯಾಗುವ ಮೂಲಕ ಇತರೆ ಕ್ರೂರಿಗಳಿಗೆ ಇದೊಂದು ಪಾಠವಾಗಬೇಕ ಹೆಣ್ಣುಮಕ್ಕಳು ಭಯಮುಕ್ತರಾಗಿ ಸಂಚರಿಸುವ ನಿಟ್ಟಿನಲ್ಲಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಾಗೂ ದ.ಕ.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ಸಲ್ಲಿಸಲು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಮೃತ ಲಾವಣ್ಯಳ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆಯ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು.
ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ ನೋಣಲ್ ಗುತ್ತು,ಚಂದ್ರಶೇಖರ ಶೆಟ್ಟಿ ಅರಳ, ದಿನೇಶ್ ಪೂಜಾರಿ ಹುಲಿಮೇರು ,ವಿಶ್ವನಾಥ್ ಶೆಟ್ಟಿಗಾರ್ ಸಂಗಬೆಟ್ಟು,ಶಿವ ಗೌಡ,ಜಾರಪ್ಪ ನಾಯ್ಕ, ವೀರಪ್ಪ ಪರವ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಸಹಾಯಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
ಶಾಸಕ ಪೂಂಜಾ ಭೇಟಿ:-

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳವಾರ ಕೊಲೆಗೀಡಾದ ಲಾವಣ್ಯ ಅವರ ಮನೆಗೆ ಭೇಟಿನೀಡಿ ಹೆತ್ತವರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
