ಪೊಳಲಿ: ಶ್ರೀ ಕ್ಷೇತ್ರ ಪೊಳಲಿಗೆ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಸೋಮವಾರ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ದೇವಿಯ ದರ್ಶನ ಪಡೆದರು.

ದೇವಳದ ತಂತ್ರೀಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ , ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್, ಪರಮೇಶ್ವರ ಭಟ್ , ಕೆ.ರಾಮ್ ಭಟ್, ಅನಂತ ಭಟ್, ಪದ್ಮನಾಭ ಭಟ್ ಹಾಗೂ ದೇವಳದ ಅರ್ಚಕರು ಶ್ರೀಗಳನ್ನು ಕ್ಷೇತ್ರಕ್ಕೆ ಕೊಂಬು ವಾಲಗದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್ , ಕೋಡಿಮಜಲ್ ಅನಂತಪದ್ಮನಾಭ ಉಪಾಧ್ಯಾಯ ಮತ್ತಿತರರು ಇದ್ದರು.

