ಬಂಟ್ವಾಳ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪಂಚ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನಗೊಂಡು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇರ್ವತೂರು ಗ್ರಾಮದ ಪಂಚಾಯಿತಿ ಅವರಣದಲ್ಲಿ ಗುರುವಾರ ಗಿಡ ನೆಡುವ ಮೂಲಕ ವರ್ಷಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸುಧೀಂದ್ರ ಶೆಟ್ಟಿ, ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಂಕರಶೆಟ್ಟಿ ಬೆದ್ರಮಾರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ. ಆರ್, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದ ಗ್ರಂಥಪಾಲಕಿ ಕೇಶಾವತಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು ಮತ್ತು ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
