ನವದೆಹಲಿ: ಶ್ವಾಶನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರಾದ ಡಾ. ಅಜಯ್ ಸ್ವರೂಪ್ ತಿಳಿಸಿದ್ದಾರೆ.
ಸೋನಿಯಾ ಅವರನ್ನು ನಿನ್ನೆ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋನಿಯಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಶ್ವಾಶನಾಳದ ಸೋಂಕಿನಿಂದ ಈ ಸಮಸ್ಯೆ ಕಾಡುತ್ತಿದ್ದು ಆತಂಕಪಡುವ ಅಗತ್ಯವಿಲ್ಲ ಎಂದು ಅಜಯ್ ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ನಿನ್ನೆ 8.30ರ ಸುಮಾರಿಗೆ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾಧಿಕಾರಿ ಅರುಪ್ ಕುಮಾರ್ ಬಸು ಅವರ ಜವಾಬ್ದಾರಿಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಳಿಗಾಲದಲ್ಲಿ ಈ ಸಮಸ್ಯೆ ಸಾಮಾನ್ಯ ಎಂದು ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

