ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿಯ ವಾರ್ಷಿಕ ಸಭೆ ಹಾಗೂ ಆಟಿದ ಕೂಟ ಕಾರ್ಯಕ್ರಮ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳೊಂದಿಗೆ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ನಡೆಯಿತು.

ಸಭಾ ಕಾರ್ಯಕ್ರಮವನ್ನು ಪುಳಿಂಚ ಸೇವಾ ಪ್ರತಿಷ್ಠಾನದ ಅಧ್ಯಕ್ಷ, ವಕೀಲ ಶ್ರೀಧರ ಶೆಟ್ಟಿ ಪುಳಿಂಚ ಉದ್ಘಾಟಿಸಿದರು. ಅವರು ಮಾತನಾಡಿ ಟೈಲರ್ ಗಳು ಕೇವಲ ಬಟ್ಟೆಗಳನ್ನು ಮಾತ್ರ ಜೋಡಿಸುವವರಲ್ಲ.ಅದರ ಜೊತೆಗೆ ಮನೆ, ಮನಗಳನ್ನು ಬೆಸೆಯುವ ಕಾರ್ಯ ಮಾಡಿರುವುದು ಈ ಕಾರ್ಯಕ್ರಮದ ಮೂಲಕ ಸಾಬೀತಾಗಿದೆ. ಜಾತಿ ಧರ್ಮದ ಕಟ್ಟುಪಾಡುಗಳನ್ನು ಮೀರಿ ವೃತ್ತಿ ಬಾಂದವೆರಲ್ಲರೂ ಒಂದೇ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಎಲ್ಲರೂ ಜೊತೆಯಾಗಿ ಬದುಕುವುದು ಇಂದಿನ ಅನಿವಾರ್ಯತೆಯಾಗಿದ್ದು ಅದು ಇಲ್ಲಿ ಎದ್ದು ಕಾಣುತ್ತಿದೆ ಎಂದರು.
ಉದ್ಯಮಿ ಸುಧಾಕರ ಆಚಾರ್ಯ ಮಾರ್ನಬೈಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕೆ ಎಸ್ ಟಿ ಎ ರಾಜ್ಯಾಧ್ಯಕ್ಷ ಸುರೇಶ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೆ ಎಸ್ ಟಿ ಎ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಯಾದೇಶ್ ತುಂಬೆ ಅಧ್ಯಕ್ಷತೆ ವಹಿಸಿದ್ದರು.ಅನಿತಾ ಸಂದೀಪ್ ಆಟಿಯ ಮಹತ್ವದ ಬಗ್ಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರಗಳಸಾಧಕರನ್ನು ಗೌರವಿಸಲಾಯಿತು.ವಿಕಲ ಚೇತನ ಬಾಲಕಿಗೆ ಧನಸಹಾಯ ಮಾಡಲಾಯಿತು. ಇಬ್ಬರು ಹಿರಿಯ ಟೈಲರ್ ಗಳನ್ನು ಗೌರವಿಸಲಾಯಿತು.
ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ,ಉದ್ಯಮಿ ಉಮೇಶ್ ಬೆಂಜನಪದವು, ಜಿಲ್ಲಾ ಪ್ರಧಾನಕಾರ್ಯದರ್ಶಿ ಈಶ್ವರ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿಕಟಪೂರ್ವಾಧ್ಯಕ್ಷ ನಾಗೇಶ್ ಎಂ. ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ತುಳಸಿ ಆರ್. ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ವಸಂತ್ ಪೂಜಾರಿ ಲೆಕ್ಕಪತ್ರ ಮಂಡಿಸಿದರು. ಕಸ್ತೂರಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು
