ಬಂಟ್ವಾಳ: ವ್ಯಕ್ತಿಯೋರ್ವರು ನೀರು ಹರಿಯುವ ತೋಡಿಗೆ ಬಿದ್ದು ನೀರು ಪಾಲಾ ಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಜೀವನ್ ಪಿಂಟೊ (48) ಎಂಬವರು ನಾಪತ್ತೆಯಾದವರಾಗಿದ್ದಾರೆ.ಅವರು ತೋಡಿನ ಇನ್ನೊಂದು ಬದಿಯಲ್ಲಿರುವ ತಮ್ಮ ಮಾವನ ಮನೆಗೆ ತೆರಳಲೆಂದು ಕಾಲು ಸಂಕದಲ್ಲಿ ದಾಟುವ ವೇಳೆ ಆಕಸರಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.
ಘಟನಾ ಸ್ಥಳದಲ್ಲಿ ಜೀವನ್ ಪಿಂಟೊ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದು, ಅವರು ತೋಡಿಗೆ ಬಿದ್ದಿದ್ದಾರೆಯೇ ಅಥವಾ ಏಲ್ಲಿಯಾದರೂ ತೆರಳಿದ್ದಾರೋ ಎಂಬುದು ಇನ್ನೂ ಖಚಿತಪಟ್ಟಿಲ್ಲ
ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ತೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ಮುಂದುವರಿದಿದೆ.
