ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೬-೨೦೨೭ ಸಾಲಿನ ಈ ಶೈಕ್ಷಣಿಕ ವರ್ಷದ ಕಾಲೇಜ್ ಅಭಿವೃದ್ಧಿ ಸಮಿತಿ ಸಭೆಯು ಮಧುಕರ ಸಭಾಂಗಣದಲ್ಲಿ ನಡೆಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಹಾಗೆಯೇ ಸಮಿತಿಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜೊತೆ ಕಾರ್ಯದರ್ಶಿಗಳನ್ನು ಘೋಷಿಸಲಾಯಿತು.
ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಖಜಾಂಚಿಯಾದ ಸತೀಶ್ ಶಿವಗಿರಿ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ವಸಂತ ಬಲ್ಲಾಳ, ಸಹ ಕಾರ್ಯನಿರ್ವಹಣಾಧಿಕಾರಿ ರವಿರಾಜ ಕಣಂತೂರು ಉಪಸ್ಥಿತರಿದ್ದರು.
ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಪ್ರಸ್ತಾವನೆಗೈದರು.
ಉಪನ್ಯಾಸಕಿ ರೋಹಿಣಿ ಕಾರ್ಯಕ್ರಮ ನಿರ್ವಹಿಸಿದರು
