ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ” ಘಟಕದ ಉದ್ಘಾಟನಾ ಕಾರ್ಯಕ್ರಮವು ಆಜಾದ್ ಭವನದಲ್ಲಿ ನಡೆಯಿತು.

ಬಾಳ್ತಿಲ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಪ್ರಕಾಶ್ ಇವರು ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿ, ವ್ಯಸನ ಹಾಗೂ ನಶಾ ಮುಕ್ತ ಭಾರತ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.
ಪದವಿ ವಿಭಾಗದ ಉಪ ಪ್ರಾಂಶುಪಾಲರಾದ ಯತಿರಾಜ್.ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾಗಿ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿನುತಲಕ್ಷ್ಮಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿಯರಾದ ಪ್ರಣಮ್ಯ ಸ್ವಾಗತಿಸಿ, ಜಯಶ್ರೀ ವಂದಿಸಿದರು, ಕು. ಕವನ ಕಾರ್ಯಕ್ರಮ ನಿರ್ವಹಿಸಿದರು, ವಿದ್ಯಾರ್ಥಿ ನಿಖಿಲ್ ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಹಾಡಿದರು
