ಬಂಟ್ವಾಳ: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆದಿರುವ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕರು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಆಡಳಿತ ಮಂಡಳಿಯ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು.


ನರಹರಿ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 2 ಕೋ.ರೂ.ವೆಚ್ಚದಲ್ಲಿ ದ್ವಿಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದ್ದು, ಈಗಾಗಲೇ ಪೂರ್ಣಗೊಂಡಿರುವ ಈ ರಸ್ತೆಯನ್ನು ಶಾಸಕರು ವೀಕ್ಷಿಸಿದರು.
ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಂಡಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿರುವುದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿತು.


ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿರುವ ಸಹಕಾರ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ನೀಡುತ್ತಿರುವ ಆದ್ಯತೆಗೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಕೃತಜ್ಞತೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಪ್ರಶಾಂತ್ ಮಾರ್ಲ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಆತ್ಮರಂಜನ್ ರೈ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *