ಬಂಟ್ವಾಳ: ವಿದ್ಯಾರ್ಥಿಗಳು ಪದವಿ ಅಧ್ಯಯನದ ಸಂದರ್ಭದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಅಭ್ಯಸಿಸಿದರೆ ಸರ್ಕಾರಿ ನೌಕರಿಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದ ಕಾರಣ ವಿದ್ಯಾರ್ಥಿಜೀವನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಂಗಳೂರಿನ ಸರ್ವಜ್ಞ ಐ.ಎ.ಎಸ್ ಅಕಾಡೆಮಿಯ ಸ್ಥಾಪಕ ನಿರ್ದೇಶಕರಾದ  ಸುರೇಶ್ ಎಂ.ಎ. ಹೇಳಿದರು. 
 
 
ಬಂಟ್ವಾಳ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಐ.ಕ್ಯು.ಎ.ಸಿ. ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ “ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ‌ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.  
 
ಪ್ರಾಂಶುಪಾಲ ಪ್ರೊ.ಎಂ.ಡಿ.ಮಂಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ವೇದಿಕೆಯಲ್ಲಿ ಐ.ಕ್ಯು.ಎ.ಸಿ. ಸಂಯೋಜಕ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಉಪಸ್ಥಿತರಿದ್ದರು. ಐ.ಕ್ಯು.ಎ.ಸಿ. ಸಹಸಂಯೋಜಕಿ  ಅಖಿಲಾ ಪೈ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ವಂದಿಸಿದರು. 

By Suddi9

Leave a Reply

Your email address will not be published. Required fields are marked *