ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಅಲಾಡಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಂಡ ಪದ್ಮಾವತಿ ಎ ಅವರ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಬಾಳಿಕೆ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ಪದ್ಮಾವತಿ ಅವರಿಗೆ ಸನ್ಮಾನಿಸಿ ಬೀಳ್ಕೋಡಲಾಯಿತು.
ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ರೋಹಿಣಿ, ಸಹ ಶಿಕ್ಷಕಿ ಪದ್ಮಾವತಿ ಯು, ಸುರೇಖಾ, ವಿದ್ಯಾರ್ಥಿಗಳುಶುಭ ಹಾರೈಸಿದರು.
ಆಲಾಡಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಯೂಸುಫ್, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು,ಪೋಷಕರು ಉಪಸ್ಥಿತರಿದ್ದರು
