ಬಂಟ್ವಾಳ: ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ,ಜಾತಿ-ಭೇದಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವುದು ಅವರ ಆಶಯವಾಗಿತ್ತು. ಸಂಘಟನೆಯಿಲ್ಲದೆ ಯಾವುದೇ ಸಮುದಾಯದ ಪ್ರಗತಿ ಸಾಧ್ಯವಿಲ್ಲ ಎಂಬುದು ನಾರಾಯಣ ಗುರುಗಳ ಸಂದೇಶವಾಗಿತ್ತು ಎಂದು ಬಂಟ್ವಾಳ ನಗರಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಹೇಳಿದ್ದಾರೆ.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನಡೆದ ಗುರುತತ್ವವಾಹಿನಿ ಮಾಲಿಕೆ 74 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಂಘಟನೆ ಹಾಗೂ ಸಾಮೂಹಿಕ ಪ್ರಯತ್ನಗಳ ಮೂಲಕ ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಮತ್ತಷ್ಟು ವೇಗ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಜಿತ್ ಅಮೀನ್, ಆಂತರಿಕ ಲೆಕ್ಕ ಪರಿಶೋಧಕ ನವೀನ್ ಲೋರಟ್ಟೋ, ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಯೋಗೀಶ್ ಕಲ್ಲಡ್ಕ, ಸುನೀತಾ ಮಾರ್ನಬೈಲು, ಸದಸ್ಯರಾದ ಪ್ರಶಾಂತ್ ಎರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪಲ್ಲಿಕಂಡ, ಉದಯ್ ಮೇನಾಡ್ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಗಣೇಶ್ ಪೂಂಜಾರೆ ಕೊಡಿ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ. ಸಹಿತ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಲ್ಲವ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ ಹಾಗೂ ಕಾರ್ತಿಕ್ ದೇರಾಜೆ ಸಂಗೀತ ಸೇವೆ ಸಲ್ಲಿಸಿದರು. ಆತಿಥ್ಯ ವಹಿಸಿದ್ದ ತಿಲಕ್ ಶಾಂತಿ ಅವರು ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ವಂದಿಸಿದರು. ಘಟಕದ ಅಧ್ಯಕ್ಷ ಕಿರಣ್ ಪೂಂಜಾರೆ ಕೊಡಿ  ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *