ಬಂಟ್ವಾಳ:  ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇವು ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ತ್ಯಾಜ್ಯ ವಿಲೇವಾರಿ ಘಟಕವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಫರಂಗಿಪೇಟೆ ಪಟ್ಟಣ ಸೇರಿದಂತೆ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಹಾಗೂ ಶಾಶ್ವತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಘಟಕವನ್ನು ನಿರ್ಮಿಸಲಾಗಿದೆ.


ಈಘಟಕದ ಸುತ್ತಮುತ್ತಲಿನ ಪ್ರದೇಶವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಿ ಉದ್ಯಾನವನ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದ್ದು,ಈ ಮೂಲಕ ತ್ಯಾಜ್ಯ ವಿಲೇವಾರಿ ಘಟಕದ ಜತೆಗೆ ಪರಿಸರ ಸ್ನೇಹಿ ವಾತಾವರಣ ನಿರ್ಮಾಣವಾಗಲಿದೆ. ಪಂಚಾಯಿತಿ ಕೈಗೊಳ್ಳುವ ಸ್ವಚ್ಚತಾ ಕಾರ್ಯಗಳಿಗೆ ಗ್ರಾಮದ ಹಾಗೂ ಪಟ್ಟಣದ  ನಾಗರಿಕರು ಸಹಕಾರ ನೀಡಬೇಕು ಎಂದರು.

By Suddi9

Leave a Reply

Your email address will not be published. Required fields are marked *