ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವತಿಯಿಂದ ಒಂದು ವಾರದ ಸಂಸ್ಕೃತ ಸಪ್ತಾಹದ ಪ್ರಯುಕ್ತ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಶನಿವಾರ ಚಾಲನೆ ನೀಡಲಾಯಿತು.

ಶ್ರೀರಾಮ ಶಿಶುಮಂದಿರದ ಮುಖ್ಯ ಮಾತಾಜಿಯಾದ ಶಾಂತಲಕ್ಷ್ಮೀ ಇವರು ದೀಪ ಪ್ರಜ್ವಲನ ಹಾಗೂ ಸಂಸ್ಕೃತ ಗ್ರಂಥಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಸ್ಕೃತ ಸಪ್ತಾಹದ ಉದ್ಘಾಟನೆಯನ್ನು ನೆರವೇರಿಸಿ ಶುಭಹಾರೈಸಿದರು.
ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ಸಂಸ್ಕೃತ ಉಪನ್ಯಾಸಕಿ ಪ್ರಸನ್ನಾ ಮಾತಾಜಿ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಸನ್ನಾ ಕಾರ್ಯಕ್ರಮ ನಿರ್ವಹಿಸಿದರು.
