ಬಂಟ್ವಾಳ: ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ  ವಿದ್ಯಾ ಕೇಂದ್ರದಲ್ಲಿ ಶನಿವಾರ ನಡೆದ ವಿದ್ಯಾ ಭಾರತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಸಹೋದರಿಯರು (ಅಕ್ಕ-ತಂಗಿ) ಅದ್ಬುತ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 


 14ರ ವಯೋಮಾನದ ಹುಡುಗಿಯರ ವಿಭಾಗದ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 8 ನೇ ತರಗತಿಯ  ವಿದ್ಯಾರ್ಥಿನಿ ಅನನ್ಯ ಎ ಆರ್   200 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಇವಳ ಅಕ್ಕ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಅನರ್ಘ್ಯ ಎ ಆರ್   200 ಮೀಟರ್ ಇಂಡಿಯುಜುವಲ್ ಮೆಡ್ಲೆ ನಲ್ಲಿ ಚಿನ್ನದ ಪದಕ ಮತ್ತು 200 ಮೀಟರ್ ಬ್ಯಾಕ್ ಸ್ಟ್ರೋಕ್  ಮತ್ತು 400 ಮೀ ಫ್ರೀಸ್ಟೈಲ್ ,  4×100 ಮೀ ಫ್ರೀಸ್ಟೈಲ್ ರಿಲೇ ಯಲ್ಲಿ 3 ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.


ಇವರಿಬ್ಬರು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ ನಾಯ್ಕ್ ಮತ್ತು ಉಮೇಶ್ ವಿಟ್ಲ ಇವರ ಶಿಷ್ಯೆಯರಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರದ ಲೋಕರಾಜ್ ವಿಟ್ಲ, ತರಬೇತುದಾರರಾದ ಸಂಜಯ್ ಮತ್ತು ಗಗನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಅಶೋಕ್ ಕುಮಾರ್ ಬರಿಮಾರು ಮತ್ತು ರೋಹಿಣಿ. ಬಿ ಯವರ ಪುತ್ರಿಯರಾಗಿದ್ದಾರೆ. 

By Suddi9

Leave a Reply

Your email address will not be published. Required fields are marked *