ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ತನ್ನ 2025–26ನೇ ಸಾಲಿನ ಸಮಗ್ರ ಕಾರ್ಯಚಟುವಟಿಕೆ ಹಾಗೂ ಉತ್ತಮ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ 12ನೇ ಬಾರಿಗೆ ಭಾಜನವಾಗಿದೆ.

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆ. ಪದ್ಮನಾಭ ಕೊಟ್ಟಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ ಗೋಪಾಲ ಕೆ. ಅವರು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಲೋಕಾನಂದ, ನಿರ್ದೇಶಕರಾದ ಸುರೇಶ್ ಶೆಟ್ಟಿ ರವರು ಉಪಸ್ಥಿತರಿದ್ದರು.
