ಬಂಟ್ವಾಳ :ತಾಲೂಕಿನ ಬಂಟ್ವಾಳ ಹೋಬಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕ ಜೆ.ಜನಾರ್ದನ್ ಮೈಸೂರು ಜಿಲ್ಲೆಗೆ ವರ್ಗಾವಣೆ ಗೊಂಡಿರುವ ಹಿನ್ನಲೆಯಲ್ಲಿ ಅವರನ್ನು ಆಡಳಿತ ಸೌಧದಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಿ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು.

ಬಂಟ್ವಾಳ ತಾಲೂಕಿನ ಕಂದಾಯ ಇಲಾಖೆಯಲ್ಲಿ ಸುಧೀರ್ಘ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಜೆ ಜನಾರ್ಧನ್ ರವರ ಸೇವೆಯನ್ನು ಅಧಿಕಾರಿಗಳು, ಸಹದ್ಯೋಗಿಗಳು ಶ್ಲಾಘಿಸಿದರು .ಬಳಿಕ ಅವರಿಗೆ ಪೇಟಾ ತೊಡಿಸಿ, ಶಾಲು ಹೊದಿಸಿ,ಸ್ಮರಣಿಕೆಯನ್ನಿತ್ತುಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ರಾದ ನರೇಂದ್ರನಾಥ್ ಮಿತ್ತೂರು ರವರು ವಹಿಸಿದ್ದರು.ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ತುಂಬೆ, ಖಜಾಂಚಿ ಬಸಯ್ಯ ಆಲಿಮಟ್ಟಿ, ಗೌರವಾಧ್ಯಕ್ಷರಾದ ಅಶೋಕ್ ಕುಮಾರ್ ರೈ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಕಛೇರಿಯ ಎಲ್ಲಾ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಕಛೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗ್ರಾಮ ಆಡಳಿತ ಅಧಿಕಾರಿ ನಿತೇಶ್ ಕಡೇಮನಿ ಸ್ವಾಗತಿಸಿದರು. ಚುನಾವಣಾ ಶಿರಸ್ತೇದಾರ್ ರಾದ ನವೀನ್ ಕುಮಾರ್ ನಿರೂಪಿಸಿದರು.ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಉಳ್ಳಟ್ಟಿ ವಂದಿಸಿದರು.
