ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
 
 ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್  ಪ್ರಣಿತ  ಮಾತನಾಡಿ,ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಪೋಕ್ಸೋ ಕಾಯ್ದೆಯ ಉದ್ದೇಶ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು ಹಾಗೂ ಯಾವುದೇ ಅಪಾಯಕಾರಿ ಅಥವಾ ಅನುಮಾನಾಸ್ಪದ ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.
ಅಕ್ಕಪಡೆಯ ಸಿಬ್ಬಂದಿಯಾದ ಸುಕೇತ ಅಕ್ಕ ಪಡೆಯ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಅಕ್ಕ ಪಡೆಯ ಸಿಬ್ಬಂದಿಯಾದ ಭವ್ಯ  ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಸಮಾಜಶಾಸ್ತ್ರ ಉಪನ್ಯಾಸಕಿ ದೀಪಿಕಾ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *